Home Crime ರಾಜ್ಯದ ಕರಾವಳಿಯಲ್ಲಿ ಹೈ ಅಲರ್ಟ್‌ : ಆಳ ಸಮುದ್ರ ಮೀನುಗಾರಿಕೆಗೆ ನಿಷೇಧ…!!

ರಾಜ್ಯದ ಕರಾವಳಿಯಲ್ಲಿ ಹೈ ಅಲರ್ಟ್‌ : ಆಳ ಸಮುದ್ರ ಮೀನುಗಾರಿಕೆಗೆ ನಿಷೇಧ…!!

ಮಂಗಳೂರು: ಭಾರತವು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಿ ಕಾರವಾರದಲ್ಲಿ ಕದಂಬ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದ್ದು ಕಾರವಾರದ ಬಂದರಿಗೆ ಬರುವ ಅನ್ಯ ದೇಶದ ಹಡುಗುಗಳಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಯಿದ್ದರೂ ನಿರ್ಬಂಧ ವಿಧಿಸಲಾಗಿದೆ. ಬಂದರಿಗೆ ಬಂದ ಹಡಗಿನಲ್ಲಿ ತೀವ್ರ ತಪಾಸಣೆ, ಮೀನುಗಾರಿಕಾ ಬೋಟ್‌ಗಳನ್ನು ಸಹ ತಪಾಸಣೆ ನಡೆಸಲಾಗುತ್ತಿದೆ. 12 ನಾಟಿಕನ್ ಮೈಲೂ ದೂರದಿಂದ ಹೊರ ಹೋಗದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದ್ದು, ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿರುವ ಕರಾವಳಿ ಕಾವಲು ಪಡೆ ಪೊಲೀಸರು ಮಂಗಳೂರಿನ ಬಂದರು ಕಡಲ ತೀರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಕರಾವಳಿ ಕಾವಲು ಪಡೆ ಅಧಿಕಾರಿಗಳು ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್‌ಗಳನ್ನ ತಪಾಸಣೆ ನಡೆಸಿ ಮೀನುಗಾರರ ದಾಖಲೆ ಪರಿಶಿಲಿಸಿದ್ದಾರೆ. ಸದ್ಯ ಅನುಮಾನಾಸ್ಪದ ಬೋಟ್‌ಗಳ ಮೇಲೆ ನಿಗಾ ಇಟ್ಟಿರುವ ಪೊಲೀಸರು ತಪಾಸಣೆ ಮುಂದುವರಿಸಿದ್ದಾರೆ. ಇದಲ್ಲದೆ ಮಲ್ಪೆ ಕಡಲತೀರ, ಮರವಂತೆ, ಪಡುಬಿದ್ರೆ -ಕಾಪು ಭಾಗದಲ್ಲಿ ಸಿಎಸ್‌ಪಿ ಪಡೆ ಕಣ್ಗಾವಲು ಇಟ್ಟಿದ್ದಾರೆ.