Home Crime ಪಡುಬಿದ್ರಿ : ಕ್ರಿಕೆಟ್ ಬೆಟ್ಟಿಂಗ್ ದಂಧೆ : ಓರ್ವ ವಶಕ್ಕೆ…!!

ಪಡುಬಿದ್ರಿ : ಕ್ರಿಕೆಟ್ ಬೆಟ್ಟಿಂಗ್ ದಂಧೆ : ಓರ್ವ ವಶಕ್ಕೆ…!!

ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಯುವಕರು ಸಂಘಟಿತರಾಗಿ ಸೇರಿಕೊಂಡು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಾ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಪೊಲೀಸರು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರಡ.

ಪೊಲೀಸರು ಆರೋಪಿಯನ್ನು ವಿಚಾರಸಿದಾಗ ಸಂಘಟಿತರಾಗಿ ಕಾನೂನು ಬಾಹಿರವಾಗಿ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಯನ್ನು ಮೂವರು ಆಪಾದಿತರು ಹಾಗೂ ಇತರರು ಸೇರಿ ನಡೆಸುತ್ತಿದ್ದರು ಎಂದು ಆರೋಪಿ ತಿಳಿಸಿದ್ದಾನೆ.

ಇವರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.