Home Latest ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ : ಕಾಂಗ್ರೆಸ್ ನಾಯಕರಿಂದ ಪ್ರಧಾನಿ ನಿವಾಸದ ಮುಂದೆ ಪ್ರತಿಭಟನೆ...

ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ : ಕಾಂಗ್ರೆಸ್ ನಾಯಕರಿಂದ ಪ್ರಧಾನಿ ನಿವಾಸದ ಮುಂದೆ ಪ್ರತಿಭಟನೆ : ಅನೇಕ ಮಂದಿಯ ಬಂಧನ…!!

ನವದೆಹಲಿ: ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಕಾಂಗ್ರೆಸ್ ನಾಯಕರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದನ್ನು ತೀವ್ರವಾಗಿ ವಿರೋಧಿಸಿದ ಕಾಂಗ್ರೆಸ್, ಸಂಬಂಧಿತ ಘಟನೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಸರ್ಕಾರ ಜವಾಬ್ದಾರಿ ವಹಿಸಬೇಕು ಎಂದು ಆಗ್ರಹಿಸಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕರು ವಿದ್ಯಾರ್ಥಿಗಳ ವಿರುದ್ಧ ಲಾಠಿ ಚಾರ್ಜ್ ನಡೆಸಿರುವುದನ್ನು ಖಂಡಿಸಿ, ಜವಾಬ್ದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಇದೇ ವೇಳೆ, ಸಂಬಂಧಿತ ಸಚಿವರ ರಾಜೀನಾಮೆಗೂ ಆಗ್ರಹ ವ್ಯಕ್ತವಾಯಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರಧಾನಿ ನಿವಾಸದ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿ ಇಟ್ಟರು.

ವಿದ್ಯಾರ್ಥಿಗಳ ವಿರುದ್ಧದ ಪೊಲೀಸರ ದೌರ್ಜನ್ಯಕ್ಕಾಗಿ ಪ್ರಧಾನಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರಧಾನಿ ನಿವಾಸದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ಅನೇಕ ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ರಾಹುಲ್ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಮಂಗಳವಾರ ಪ್ರಧಾನಿಯವರ ಲೋಕ ಕಲ್ಯಾಣ ಮಾರ್ಗದ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು. ಪ್ರಧಾನಿ ವಿರುದ್ಧ ಘೋಷಣೆಗಳನ್ನು ಕೂಗಿದ ಕಾಂಗ್ರಸ್ ಸಂಸದರು ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಧರಣಿಯಲ್ಲಿ ಭಾಗವಹಿಸಿದ್ದರು.