ಮಂಗಳೂರು : ಚಿಕಿತ್ಸೆಗಾಗಿ ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಸಾವನ್ನಪ್ಪಿದ ಘಟನೆ ಗುರುವಾರ ವರದಿಯಾಗಿದೆ.
ಉಡುಪಿ ಪೆರ್ಡೂರು ಹೊಲಗದ್ದೆ ನಿವಾಸಿ ರಾಜೇಶ್ (38) ಮೃತಪಟ್ಟ ಕೈದಿ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಹಿರಿಯಡ್ಕದ ಜೈಲು ಸೇರಿದ್ದ ಈತನಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಗುರುವಾರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



