ಬ್ರಹ್ಮಾವರ : ಕಾರು ಢಿಕ್ಕಿ ಹೊಡೆದ ಪರಿಣಾಮ ಬಾರಕೂರಿನ ಉದಯ ಕುಮಾರ್ ಶೆಟ್ಟಿ (62) ಮೃತಪಟ್ಟ ಘಟನೆ ಎಸ್.ಎಂ.ಎಸ್. ಬಳಿ ಗುರುವಾರ ಸಂಭವಿಸಿದೆ.
ಉದಯ ಕುಮಾರ್ ಶೆಟ್ಟಿ ಅವರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಉಡುಪಿ ಕಡೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆಯಿತು. ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ, ಅನಂತರ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿ ಉದಯ ಕುಮಾರ್ ಶೆಟ್ಟಿ ಅವರು ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.
ಉದಯ ಕುಮಾರ್ ಶೆಟ್ಟಿ ಅವರು ಕೆನರಾ ಬ್ಯಾಂಕ್ ನಿವೃತ್ತ ಉದ್ಯೋಗಿಯಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



