ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮಠದಕೆರೆ ನಿವಾಸಿ ಗಣೇಶ (48) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಮೃತರ ಸಹೋದರ ಸುರೇಶ್ ಪೂಜಾರಿ (56) ಅವರು ನೀಡಿದ ದೂರಿನ ಪ್ರಕಾರ, ಗಣೇಶ ಅವರು ಕೂಲಿ ಕೆಲಸ ಮಾಡಿಕೊಂಡಿದ್ದು, ವಿವಾಹವಾಗಿರಲಿಲ್ಲ. ಅವರಿಗೆ ಮದ್ಯಪಾನದ ಚಟವಿದ್ದು, ಜುಲೈ 21ರಂದು ಬೆಳಿಗ್ಗೆ 9.30ರಿಂದ 11.40 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಪಕ್ಕದ ಕೊಟ್ಟಿಗೆಯ ಮರದ ಜಂತಿಗೆ ನೈಲಾನ್ ಹಗ್ಗ ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




