ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಇರುವ ಅಡಿಕೆ ಹಾಗೂ ಕಾಡುತ್ಪತ್ತಿ ಖರೀದಿ ಅಂಗಡಿಯಿoದ ನಗದು ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಅಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ಮೂಡಿಗೆರೆ ನಿವಾಸಿ ಮುಹಮ್ಮದ್ ಶಹಬಾದ್(26) ಹಾಗೂ ಜಂಶೀದ್(25) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳು ಚಿಕ್ಕಮಗಳೂರಿನ ಎನ್.ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಯೊoದರಿoದ ನಗದು ಕಳವುಗೈದ ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ಠಾಣಾ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಉಪ್ಪಿನಂಗಡಿಯಲ್ಲಿ ಕಳ್ಳತನ ಮಾಡಿರುವುದನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ.
ಅ.27ರಂದು ಉಪ್ಪಿನಂಗಡಿ ಗಾಂಧಿಪಾರ್ಕ್ ಬಳಿಯ ಅಡಿಕೆ ಹಾಗೂ ಕಾಡುತ್ಪತ್ತಿ ಕೇಂದ್ರದಿoದ 5 ಲಕ್ಷ ರೂಪಾಯಿ ನಗದು ಕಳವಾಗಿತ್ತು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎನ್.ಆರ್ ಪುರ ಪೊಲೀಸರು ಆರೋಪಿಗಳನ್ನು ಉಪ್ಪಿನಂಗಡಿ ಠಾಣೆಗೆ ಕರೆತಂದಿದ್ದಾರೆ. ಉಪ್ಪಿನಂಗಡಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಮಹಜರು ನಡೆಸಿದ್ದಾರೆ.



