ಸುಳ್ಯ: ರಸ್ತೆ ಅಪಘಾತ ಸಂಭವಿಸಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ಮೈಸೂರಿನ ಮಳವಳ್ಳಿಯಲ್ಲಿ ನಡೆದಿದೆ.
ಮೃತ ಯುವಕ ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಪಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿತ್ (25) ಎಂದು ತಿಳಿದು ಬಂದಿದೆ.
ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕಿದ್ದ ದೀಕ್ಷಿತ್ ಬೆಂಗಳೂರಿನಿಂದ ಕಂದಡ್ಕದ ಕಲ್ವಾರಿನ ತನ್ನ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾಗಿ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಿಂದ ಗಂಭೀರವಾಗಿ ಗಾಯಗೊಂಡ ದೀಕ್ಷಿತ್ ನನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.



