Home Crime ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ : ಪ್ರಕರಣ ದಾಖಲು..!

ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ : ಪ್ರಕರಣ ದಾಖಲು..!

ಪಡುಬಿದ್ರಿ, ಜು. 22: ಉಚ್ಚಿಲ ಪೇಟೆ ಸಮೀಪ ದ್ವಿಚಕ್ರ ವಾಹನವೊಂದಕ್ಕೆ ಕಾರು ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರರಾದ ಶೇಖ್ ಮೊಹಮ್ಮದ್ ಆಪ್ಲಾಲ್ (19), ಮೊಹಮ್ಮದ್ ರುಹೈಜ್ ಜೆ. ರಸ್ತೆಗೆ ಬಿದ್ದು ಗಾಯಗೊಂಡ ಬಗ್ಗೆ ವರದಿಯಾಗಿದೆ.

ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಗೆ ಬಳಿಕ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಕಾರು ಚಾಲಕ ಮೊಹಮ್ಮದ್ ಆಸೀಫ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.