ಕಾರ್ಕಳ : ಪರವಾನಗಿ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡು 8 ಸಾವಿರ ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ.
ನಲ್ಲೂರು ಕಿಂಡಿ ಅಣೆಕಟ್ಟು ಸಮೀಪದ ಹೊಳೆಯಲ್ಲಿ ಅಕ್ರಮವಾಗಿ ಮರಳು ತೆಗೆದು ಗೂಡ್ಸ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುವ ಕುರಿತು ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಟೆಂಪೋ ಚಾಲಕ ಹಾಗೂ 8 ಸಾವಿರ ಮೌಲ್ಯದ ಮರಳು ಹಾಗೂ ಟೆಂಪೋ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.



