ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ವಾಹನಗಳ 05 ಬ್ಯಾಟರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 68/2026 ಕಲಂ: 303(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಪ್ರಕರಣದ ಆರೋಪಿತನಾದ ಕೇರಳ ಕಾಸರಗೋಡು ನಿವಾಸಿ ಅಬ್ದುಲ್ ಮಜಿದ್ (33) ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿ, ಸದ್ರಿ ಆರೋಪಿಯು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣದಲ್ಲಿ ಕಳವುಗೈದ 05 ಬ್ಯಾಟರಿಗಳನ್ನು ಸ್ವಾಧೀನಪಡಿಸಲಾಯಿತು.




