Home Crime ವಿಟ್ಲ : ಕೆಎಸ್ಆರ್ ಟಿ ಸಿ ಬಸ್ ಹಾಗೂ ಓಮ್ನಿ ಕಾರ್ ನಡುವೆ ಅಪಘಾತ…!!

ವಿಟ್ಲ : ಕೆಎಸ್ಆರ್ ಟಿ ಸಿ ಬಸ್ ಹಾಗೂ ಓಮ್ನಿ ಕಾರ್ ನಡುವೆ ಅಪಘಾತ…!!

ವಿಟ್ಲ: ಕೆಎಸ್ ಆರ್ ಟಿ ಸಿ ಬಸ್ ಮತ್ತು ಓಮ್ನಿ ಕಾರೊಂದರ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ ರವಿವಾರ ಸಂಭವಿಸಿದೆ.

ಮೃತರನ್ನು ಓಮ್ನಿ ಕಾರು ಚಾಲಕ, ಮೈರ ನಿವಾಸಿ ಮೋನಪ್ಪ ಕುಲಾಲ್ ಎಂದು ಗುರುತಿಸಲಾಗಿದೆ. ಮೋನಪ್ಪರ ಪತ್ನಿ ಲಲಿತಾ ಮತ್ತು ಜೊತೆಗಿದ್ದ ರಮಣಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.

ವಿಟ್ಲದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಪಕಳಕುಂಜದಿಂದ ವಿಟ್ಲ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮುಳಿಯ ಎಂಬಲ್ಲಿ ಮುಖಾಮುಖಿ ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಓಮ್ಮಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದರು. ಈ ಪೈಕಿ ಮೋನಪ್ಪ ಕುಲಾಲ್ ಮೃತಪಟ್ಟಿದ್ದಾರೆ.

ವಿಟ್ಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.