ಮಂಗಳೂರು: ಬೆಂಗಳೂರಿನಿಂದ ಮಾದಕ ವಸ್ತುವನ್ನು ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಬಂಧಿಸಿದ್ದಾರೆ.
ಕಾರಿನಲ್ಲಿ ಬರುತ್ತಿದ್ದ ಅಹಮ್ಮದ್ ಶಾಬೀತ್, ಮತ್ತು ಆತನ ತಂಡವನ್ನು ಅರ್ಕುಳ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ.
ಅಹಮ್ಮದ್ ಶಾಬೀತ್ (35), ಮಹಮ್ಮದ್ ಶಂಶೀರ್ (36), ನೌಶೀನ (27), ಎಂಬವರೇ ಬಂಧಿತ ಆರೋಪಿಗಳು.
ಬಂಧಿತರಿಂದ ಸುಮಾರು 90 ಗ್ರಾಂ ಮಾದಕ ವಸ್ತು ಸಹಿತ ಬಿಳಿ ಬಣ್ಣದ KL-58-W-6342 ಮಾರುತಿ ಸ್ವಿಪ್ಟ್ ಕಾರು ಮತ್ತು ಮೊಬೈಲ್ ಪೋನ್ ಗಳನ್ನು ವಶಪಡಿಸಿ ಕೊಂಡಿದ್ದಾರೆ.
ಅಹಮ್ಮದ್ ಶಾಬೀತ್ ಎಂಬುವನು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ನಿರಂತರವಾಗಿ ಬೆಂಗಳೂರಿನಿಂದ ಮಾದಕ ವಸ್ತುವಾದ MDMA ಯನ್ನು ತಂದು ಸರಬರಾಜು ಮಾಡುತ್ತಿದ್ದು, ಅಲ್ಲದೇ ಈ ತಂಡದಲ್ಲಿ ಯಾರಿಗೂ ಅನುಮಾನ ಬಾರದಂತೆ ಮಹಿಳೆಯಾದ ನೌಶಿನ ಎಂಬವರನ್ನು ಜೊತೆಗೆ ಇರಿಸಿಕೊಂಡು ಮಾದಕ ವಸ್ತುವನ್ನು ಸಾಗಾಟ ಮಾಡುತ್ತಿದ್ದನು.
ಖಚಿತ ಮಾಹಿತಿಯನ್ನು ಕಲೆ ಹಾಕಿದ ಮಂಗಳೂರು ನಗರದ ಸಿಸಿಬಿ ವಿಭಾಗದ ಅಧಿಕಾರಿಗಳು ಈ ತಂಡವನ್ನು ಬಂಧಿಸಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.



