Home Latest ಉಡುಪಿ: ಕ್ಷಿಪ್ರ ಕಾರ್ಯಾಚರಣೆಯಿಂದ ಬಾಲಕನನ್ನು ರಕ್ಷಿಸಿದ ಅಕ್ಕಪಡೆ..!!

ಉಡುಪಿ: ಕ್ಷಿಪ್ರ ಕಾರ್ಯಾಚರಣೆಯಿಂದ ಬಾಲಕನನ್ನು ರಕ್ಷಿಸಿದ ಅಕ್ಕಪಡೆ..!!

ಉಡುಪಿ ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ ತರಗತಿ ವಿದ್ಯಾರ್ಥಿಯನ್ನು ಅಕ್ಕಪಡೆ ಸಿಬ್ಬಂದಿ ಸಮಯೋಚಿತ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಪತ್ತೆ ಹಚ್ಚಿದ್ದಾರೆ. ಜುಲೈ 19ರಂದು ಉಡುಪಿ ಜಿಲ್ಲಾ ಕಂಟ್ರೋಲ್ ರೂಮ್‌ಗೆ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಕಾಣೆಯಾಗಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಮಾಹಿತಿ ದೊರಕುತ್ತಿದ್ದಂತೆ ಅಕ್ಕಪಡೆ ಸಿಬ್ಬಂದಿ ತಕ್ಷಣವೇ ಹುಡುಕಾಟ ಆರಂಭಿಸಿದರು.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪರಿಶೀಲನೆ ನಡೆಸಿದ ವೇಳೆ, ಬಾಲಕ ಮುದ್ದೇಬಿಹಾಳಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಇರುವುದನ್ನು ಸಿಬ್ಬಂದಿ ಗುರುತಿಸಿದರು.

ತಕ್ಷಣವೇ ಬಸ್‌ನ್ನು ನಿಲ್ಲಿಸಿ ಬಾಲಕನನ್ನು ಸುರಕ್ಷಿತವಾಗಿ ವಶಕ್ಕೆ ಪಡೆದು, ಬಳಿಕ ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಲಾಯಿತು.

ಅಕ್ಕಪಡೆ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ಬಾಲಕ ಸುರಕ್ಷಿತವಾಗಿ ಪತ್ತೆಯಾಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.