Home Latest ಉಡುಪಿ-ಸರಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಕೊಡುಗೆ ಅಪಾರ : ಯಶ್ ಪಾಲ್ ಸುವರ್ಣ..!!

ಉಡುಪಿ-ಸರಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಕೊಡುಗೆ ಅಪಾರ : ಯಶ್ ಪಾಲ್ ಸುವರ್ಣ..!!

ಉಡುಪಿ-ಸರಕಾರಿ ಪದವಿ ಪೂರ್ವ ಕಾಲೇಜು ( ಪ್ರೌಢ ಶಾಲಾ ವಿಭಾಗ) ತೆಂಕನಿಡಿಯೂರು. ಇದರ ನೂತನ ಶೌಚಾಲಯ, ಸೈಕಲ್ ಸ್ಟ್ಯಾಂಡ್, ವಿದ್ಯಾರ್ಥಿಗಳ ಶಾಲಾ ಸಂಸತ್ ಹಾಗೂ ಯಕ್ಷ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಸರ್ಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಸಹಕಾರ ಮಹತ್ವದಾಗಿದ್ದು,
ಶಾಲಾಭಿವೃದ್ಧಿ ಸಮಿತಿಯ ಬೇಡಿಕೆಯಂತೆ ಅನುದಾನ ಒದಗಿಸಿ ಸುಮಾರು 4 ಲಕ್ಷ ವೆಚ್ಚದಿಂದ ನೂತನ ಶೌಚಾಲಯ ಕಟ್ಟಡ ನಿರ್ಮಾಣವಾಗಿದೆ. ಶಾಲೆಯಲ್ಲಿ ಶಿಕ್ಷಕರಾಗಿದ್ದ ಶ್ರೀಮತಿ ಪ್ರಕಾಶಿನಿ ಯವರ ಸ್ಮರಣಾರ್ಥ ಅವರ ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ಸ್ಟ್ಯಾಂಡ್ ನಿರ್ಮಿಸುವ ಮೂಲಕ ಶಿಕ್ಷಣಕ್ಕೆ ವಿಶೇಷ ಸಹಕಾರ ನೀಡಿದ ಕುಟುಂಬ ಸದಸ್ಯರಿಗೆ ಶಾಸಕನ ನೆಲೆಯಲ್ಲಿ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜಗದೀಶ್ ಆಚಾರ್ಯ, ಮಾಜಿ ಅಧ್ಯಕ್ಷರಾದ ಸುಕನ್ಯ ಶೆಟ್ಟಿ, ಮಾಜಿ ನಗರಸಭಾ ಸದಸ್ಯರಾದ ವಿಜಯ ಕೊಡವೂರು, ದಾನಿಗಳಾದ ಆನಂದ ಸ್ಥಳೀಯ ಪ್ರಮುಖರಾದ ಶರತ್ ಬೈಲಕೆರೆ, ಗಾಯತ್ರಿ ಸುರೇಶ್, ಕೃಷ್ಣ ಶೆಟ್ಟಿ, ಚರಣ್ ರಾಜ್, ಯಕ್ಷಗಾನ ಗುರುಗಳಾದ ರತ್ನಾಕರ ಶೆಣೈ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಕರಬ ಉಪಸ್ಥಿತರಿದ್ದರು.

ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗಾಯತ್ರಿ ಎನ್. ಸ್ವಾಗತಿಸಿ, ಶಿಕ್ಷಕರಾದ ದಿವಾಕರ ನಾಯಕ್ ಕಾರ್ಯಕ್ರಮ ನಿರೂಪಿಸಿದರು.