ಉಡುಪಿ: ಇತ್ತೀಚೆಗೆ ನ್ಯಾಯಯುತವಾದ ಹೋರಾಟಕ್ಕಿಳಿದ ವಿದ್ಯಾರ್ಥಿಗಳ ಮೇಲೆ ದೆಹಲಿಯಲ್ಲಿ ನಡೆದ ಕ್ರೌರ್ಯವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಅಶ್ವಿನ್ ಕೋಟ್ಯಾನ್ ತೀವ್ರವಾಗಿ ಖಂಡಿಸಿದ್ದಾರೆ.
ನೀಟ್ ಪರೀಕ್ಷೆಯು ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸುವ ಹಂತ. ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಂರಕ್ಷಣೆ ಸರಕಾರದ ಜವಾಬ್ದಾರಿಯಾಗಿದ್ದು ಈ ಗೌಪ್ಯತೆಯನ್ನು ಕಾಪಾಡುವ ವಿಷಯದಲ್ಲಿ ಸರಕಾರವು ಸಂಪೂರ್ಣವಾಗಿ ವಿಫಲವಾಗಿದೆ. ಕೆಲವು ಪ್ರತಿಭಾವಂತ ವಿದ್ಯಾರ್ಥಿಗಳು ಇದರಿಂದ ನಿರಾಶೆಗೊಂಡು ನೊಂದುಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಕಾರದ ಈ ವರ್ತನೆಯನ್ನು ಖಂಡಿಸಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಯುವಜನರ ಸಂವಿಧಾನಾತ್ಮಕ ಹಕ್ಕನ್ನು ಸರಕಾರವು ಹತ್ತಿಕ್ಕಲು ಪ್ರಯತ್ನಿಸಿರುವುದು ದುರಂತದ ವಿಚಾರ. ಈ ವಿಷಯದಲ್ಲಿ ಜವಾಬ್ದಾರಿ ಸ್ಥಾನದಲ್ಲಿರುವ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿರುತ್ತಾರೆ. ಕೇಂದ್ರ ಸರಕಾರದ ಈ ಬೇಜವಾಬ್ದಾರಿತನವು ಹೀಗೆ ಮುಂದುವರಿದಲ್ಲಿ ಇದರ ವಿರುದ್ಧ ಯುವಕರು ಸಂಘಟಿತರಾಗಿ ದೇಶದಾದ್ಯಂತ ಪ್ರತಿಭಟಿಸಬೇಕಾಗುತ್ತದೆ. ಸರಕಾರವು ಯುವಜನರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕೆಂದು ಅವರು
ಒತ್ತಾಯಿಸಿರುತ್ತಾರೆ.




