ಕೊಲ್ಲೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಲಕ್ಷ್ಯವಾಗಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ರತ್ನಾಕರ ನಾಯ್ಕ (36) ಅವರು ತಮ್ಮ ಬೈಕ್‌ನಲ್ಲಿ ಮಾನಿನಕಾರು ಕಡೆಯಿಂದ ಕೊಲ್ಲೂರು ಕಡೆಗೆ ತೆರಳುತ್ತಿದ್ದ ವೇಳೆ, ಜಗನ್ಮಾತಾ ಹೋಟೆಲ್ ಎದುರು ರಸ್ತೆಯ ಮಧ್ಯಭಾಗದಲ್ಲಿ ಯಾವುದೇ ಸೂಚನಾ ಚಿಹ್ನೆ ಇಲ್ಲದೆ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ.
ಅಪಘಾತದಲ್ಲಿ ರತ್ನಾಕರ ನಾಯ್ಕ ಅವರ ಎಡ ಕೈ ಮೊಣಕೈ, ತಲೆಯ ಹಿಂಭಾಗ, ಮುಖದ ದವಡೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಾಯಗಳಾಗಿದ್ದು, ಅವರನ್ನು ಕುಂದಾಪುರದ ಚಿನ್ಮಯಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಲಾರಿ ಚಾಲಕ ಪ್ರದೀಪ ವಡಗರ್ ವಿರುದ್ಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




