Home Crime ವೃದ್ಧೆಯ ಮನೆಯಲ್ಲಿ ಕಳ್ಳತನ : ಮೂವರು ಅರೆಸ್ಟ್….!!

ವೃದ್ಧೆಯ ಮನೆಯಲ್ಲಿ ಕಳ್ಳತನ : ಮೂವರು ಅರೆಸ್ಟ್….!!

ಸುರತ್ಕಲ್ : ವೃದ್ಧೆಯೊಬ್ಬರ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳಿಂದ 4.43 ಲಕ್ಷ ಮೌಲ್ಯದ ಚಿನ್ನಾಭರಣಗಳು, ಬೈಕ್, 3 ಸಾವಿರ ನಗದು ವಶಕ್ಕೆ ಪಡೆದಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಬಂಧಿತರನ್ನು ಸುರತ್ಕಲ್ ಗುಡ್ಡೆಕೊಪ್ಲ ಶ್ರೀ ರಾಮ ಭಜನಾ ಮಂದಿರ ಬಳಿಯ ನಿವಾಸಿ ಶೈನ್ ಎಚ್. ಪುತ್ರನ್ ಯಾನೆ ಶಯನ್ ಯಾನೆ ಶೈನ್ (21), ಬೆಂಗಳೂರು ಎಳಚನಹಳ್ಳಿ, ಕಾಶಿನಗರ 5ನೇ ಕ್ರಾಸ್ ನಿವಾಸಿ ವಿನೋದ್ ಯಾನೆ ಕೋತಿ ಯಾನೆ ವಿನೋದ್ ಕುಮಾರ್ (33), ಬೆಂಗಳೂರು ಉಡಿಪಾಳ್ಯ ಕನಕಪುರ ಮುಖ್ಯ ರಸ್ತೆ ನಿವಾಸಿ ಗಿರೀಶ್ ಯಾನೆ ಸೈಕಲ್ ಗಿರಿ (28) ಎಂದು ಗುರುತಿಸಲಾಗಿದೆ.

ಸುರತ್ಕಲ್ ಮುಕ್ಕ ನಿವಾಸಿ ವೃದ್ದೆ ಜಲಜ ಅವರ ಮನೆಯಿಂದ ಡಿಸೆಂಬರ್ 3ರಂದು ಅಪರಿಚಿತರು ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಗೆ ಪ್ರವೇಶಿಸಿ ಚಿನ್ನಾಭರಣ ಕಳವು ಮಾಡಿದ್ದರು

ವೃದ್ಧೆಯ ಕುತ್ತಿಗೆಗೆ ಬಟ್ಟೆ ಬಿಗಿದು, ಗೋಡ್ರೇಜ್ನಲ್ಲಿದ್ದ ಸುಮಾರು 16 ಗ್ರಾಂ ಚಿನ್ನದ ಸರ, 20 ಗ್ರಾಂ ತೂಕದ ಎರಡು ಚಿನ್ನದ ಬಳೆ, ಹಾಗೂ 14 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದರು. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.