Home Crime ಶಿವಮೊಗ್ಗ-ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ..!!

ಶಿವಮೊಗ್ಗ-ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ..!!

ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯನ್ನು ಪರಿಚಯಿಸಿಕೊಂಡ ಯುವಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಯುವಕನಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ 31 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನೆಂದು 2024ರಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಯ ಅಂದಿನ ಪಿಎಸ್ಐ ಕವಿತ ಅವರು ಪ್ರಕರಣದ ತನಿಖೆ ನಡೆಸಿ, ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣ ಪತ್ರವನ್ನು ಸಲ್ಲಿಸಿದ್ದರು.

ಪ್ರಕರಣವು ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ಪ್ರಕರಣದಲ್ಲಿ ಯುವಕನ ಆರೋಪ ಸಾಬೀತಾದ ಹಿನ್ನಲೆ ನ್ಯಾಯಾಧೀಶರು ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ 31 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.