Home Latest 1. ನೀಟ್ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

1. ನೀಟ್ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

ನವದೆಹಲಿ: ದೇಶಾದ್ಯಂತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ವಿದ್ಯಾರ್ಥಿ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಈ ಕ್ರಮವನ್ನು ಸ್ವಾಗತಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.