ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಎರಡನೇ ಆರೋಪಿ ಮನೀಶ್ ಗೆ ಹೈ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
ಹೈಕೋರ್ಟ್ ನ್ಯಾಯದೀಶರಾದ ಜಸ್ಟೀಸ್ ವಿಶ್ವಜಿತ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು.
ನ್ಯಾಯಾಲಯವು ತನಿಖೆಗೆ ಸಹಕರಿಸುವುದು, ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರುವಂತಿಲ್ಲ, ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿಯನ್ನು ತೊರೆಯಬಾರದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.
ಪ್ರಕರಣದ ವಿಚಾರಣೆ ಮುಂದುವರಿದಿದ್ದು, ಉಳಿದ ಆರೋಪಿಗಳ ವಿರುದ್ಧದ ಕಾನೂನು ಪ್ರಕ್ರಿಯೆಯೂ ಮುಂದುವರಿಯಲಿದೆ.




