ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯದ CC No.1017/25 ಪ್ರಕರಣದಲ್ಲಿ ವಾರಂಟ್ ಆಸಾಮಿಯಾಗಿದ್ದ ಪುಷ್ಪವತಿ ಅವರನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸರು ಶಿಬಾಜೆ ಗ್ರಾಮದಲ್ಲಿ ಬಂಧಿಸಿ, ನಂತರ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯದಿಂದ ಹೊರಡಿಸಲಾಗಿದ್ದ ವಾರಂಟ್‌ನ ಅನ್ವಯ ಕಾರ್ಯಾಚರಣೆ ನಡೆಸಿದ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ಕಾನೂನು ಕ್ರಮವನ್ನು ನ್ಯಾಯಾಲಯ ಕೈಗೊಂಡಿದೆ.




