Home Crime ಬೆಳ್ತಂಗಡಿ: ಆಭರಣ ಮಳಿಗೆಯ ವ್ಯವಸ್ಥಾಪಕನಿಂದ ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ…!!

ಬೆಳ್ತಂಗಡಿ: ಆಭರಣ ಮಳಿಗೆಯ ವ್ಯವಸ್ಥಾಪಕನಿಂದ ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ…!!

ಬೆಳ್ತಂಗಡಿ: ನಗರದ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕ ಹಾಗೂ ಇತರರು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ‌ ಆರೋಪ ಕೇಳಿ ಬಂದಿದೆ.

ವೇಣೂರು ಸಮೀಪದ ಮೂವರು ವಿದ್ಯಾರ್ಥಿಗಳು ಸೋಮವಾರ ಶಾಲೆಗೆ ರಜೆ ಹಾಕಿ, ಮಧ್ಯಾಹ್ನದ ಬಳಿಕ ಬೆಳ್ತಂಗಡಿ ಪೇಟೆಯಲ್ಲಿ ಪ್ರತಿ ಸೋಮವಾರ ನಡೆಯುವ ಸಂತೆಗೆಂದು ಬಂದಿದ್ದರು. ಅಲ್ಲಿ ಸುತ್ತಾಡಿದ ಬಳಿಕ ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ಪಕ್ಕದಲ್ಲಿ ಕುಳಿತು ಮೊಬೈಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಧರ್ಮದ ಹೆಸರಿನಲ್ಲಿ ನಿಂದನೆ ಮಾಡಿ, ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹಲ್ಲೆ ನಡೆಸಿದ್ದನ್ನು ಪ್ರಶ್ನಿಸಲು ಹೋಗಿದ್ದ ವಿದ್ಯಾರ್ಥಿಗಳ ಪೋಷಕರೊಂದಿಗೆ ಆಭರಣ ಮಳಿಗೆಯ ವ್ಯವಸ್ಥಾಪಕ ಸಹಿತ ಇತರೆ ಸಿಬ್ಬಂದಿ ವಾಗ್ವಾದ ನಡೆಸಿ ನಿಂದಿಸಿರುವ ಆರೋಪ ಕೂಡ ಕೇಳಿಬಂದಿದೆ.

ಘಟನೆಯ ವೇಳೆ ಮೂವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಹಲ್ಲೆಯಿಂದ ತಪ್ಪಿಸಿಕೊಂಡು ಓಡಿ ಹೋಗಿ ನಾಪತ್ತೆಯಾಗಿದ್ದನು. ಆ ಬಳಿಕ ರಾತ್ರಿ ಹುಡುಕಾಡಿದಾಗ ಪೋಷಕರ ಕೈಗೆ ಸಿಕ್ಕಿದ್ದಾನೆ.

ಸದ್ಯ ಹಲ್ಲೆಯಿಂದ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಆಸ್ಪತ್ರೆಯಲ್ಲಿ ಮಕ್ಕಳ ಹೇಳಿಕೆ ದಾಖಲಿಸಿದ ಬೆಳ್ತಂಗಡಿ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.