Home Crime ಕಾಪು: ಟೈಮಿಂಗ್ ವಿವಾದ : ಎರಡು ಎಕ್ಸ್‌ಪ್ರೆಸ್ ಬಸ್‌ಗಳ ನಡುವೆ ಢಿಕ್ಕಿ…!!

ಕಾಪು: ಟೈಮಿಂಗ್ ವಿವಾದ : ಎರಡು ಎಕ್ಸ್‌ಪ್ರೆಸ್ ಬಸ್‌ಗಳ ನಡುವೆ ಢಿಕ್ಕಿ…!!

ಕಾಪು : ನಗರದ ಸರ್ವಿಸ್ ರಸ್ತೆಯಲ್ಲಿ ಎರಡು ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕೆಲಕಾಲ ಪ್ರಯಾಣಿಕರಲ್ಲಿ ಆತಂಕ ಉಂಟಾದ ಘಟನೆ ಸೋಮವಾರ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಆನಂದ್ ಟ್ರಾವೆಲ್ಸ್ ಬಸ್, ಕಾಪು ಬಸ್ ನಿಲ್ದಾಣದ ಬಳಿ ನಿಂತಿದ್ದ ಸಂದೇಶ್ ಟ್ರಾವೆಲ್ಸ್ ಬಸ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯ ಬಳಿಕ ಎರಡೂ ಬಸ್ ಸಿಬ್ಬಂದಿ ನಡುವೆ ಟೈಮಿಂಗ್ ವಿಚಾರವಾಗಿ ತೀವ್ರ ವಾಗ್ವಾದ ನಡೆದಿದೆ.
ಟೈಮಿಂಗ್ ಸ್ಪರ್ಧೆಯ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ಗಲಾಟೆ ಎಬ್ಬಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಸುಮಾರು 15 ನಿಮಿಷಗಳ ಕಾಲ ಎರಡೂ ಕಡೆಯ ಸಿಬ್ಬಂದಿ ಪರಸ್ಪರ ವಾಗ್ವಾದ ನಡೆಸಿದ ಪರಿಣಾಮ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಆತಂಕಕ್ಕೆ ಒಳಗಾದರು.

ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು, ಎರಡೂ ಬಸ್‌ಗಳನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.