Home Latest ಮಂಗಳೂರು : ಶೂ ಮಾರಾಟ ಮಳಿಗೆ ಬೆಂಕಿಗಾಹುತಿ..!!

ಮಂಗಳೂರು : ಶೂ ಮಾರಾಟ ಮಳಿಗೆ ಬೆಂಕಿಗಾಹುತಿ..!!

ಮಂಗಳೂರು: ಶೂ ಮಾರಾಟ ಮಾಡುವ ಅಂಗಡಿಯೊಂದರಲ್ಲಿ ಬೆಂಕಿ ಅವಗಡ ಆಕಸ್ಮಿಕವಾಗಿ ಸಂಭವಿಸಿದ ಘಟನೆ ಹಂಪನಕಟ್ಟೆಯಲ್ಲಿ ನಡೆದಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ.

ಬೆಳಗ್ಗೆ ಸುಮಾರು ಒಂಬತ್ತು ಗಂಟೆಯ ವೇಳೆಗೆ ಈ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಶೂ ಮಳಿಗೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಘಟನೆಯಿಂದ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ದುರಂತದಿಂದ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.