ಬಂಟ್ವಾಳ: ಮಾನ್ಯ ಬಂಟ್ವಾಳ ನ್ಯಾಯಾಲಯದ CC No. 578/2020 ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಜಾರಿಯಾಗಿದ್ದ ಆರೋಪಿ ಸಂಜಯ್ ಸಹಾನಿ ಅವರನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯದ ಆದೇಶದಂತೆ ವಾರಂಟ್ ಜಾರಿಗೊಳಿಸಿದ ಬಂಟ್ವಾಳ ನಗರ ಠಾಣೆ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ, ಬಳಿಕ ಮಾನ್ಯ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಮುಂದಿನ ಕಾನೂನು ಕ್ರಮ ಕೈಗೊಂಡಿದೆ.




