ಕೋಟ: ಪಾಂಡೇಶ್ವರ ಗ್ರಾಮದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಯುವಕನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಮನಿತ್ ಎಂಬಾತನನ್ನು ವಶಕ್ಕೆ ಪಡೆದು ಆತನಿಂದ ಐಫೋನ್ ಮೊಬೈಲ್ ಹಾಗೂ 800 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ.
ಪಾರ್ಕರ್777 ಆ್ಯಪ್ ಬಳಸಿ ಓಮನ್–ಜಿಂಬಾಂಬ್ವೆ ಟಿ20 ಪಂದ್ಯಕ್ಕೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.



