Home Crime ಅನ್ನಭಾಗ್ಯ ಯೋಜನೆಯ ಉಚಿತ ಪಡಿತರ ಅಕ್ಕಿ ಅಕ್ರಮ ಸಾಗಾಟ : ಪ್ರಕರಣ ದಾಖಲು…!!

ಅನ್ನಭಾಗ್ಯ ಯೋಜನೆಯ ಉಚಿತ ಪಡಿತರ ಅಕ್ಕಿ ಅಕ್ರಮ ಸಾಗಾಟ : ಪ್ರಕರಣ ದಾಖಲು…!!

ಬ್ರಹ್ಮಾವರ: ಅನ್ನಭಾಗ್ಯ ಯೋಜನೆಯ ಉಚಿತ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕೋಟ ಪೊಲೀಸರು ಹಾಗೂ ಆಹಾರ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಿದ್ದಾರೆ.

ಆಹಾರ ನಿರೀಕ್ಷಕ ವಸಂತ ಕುಮಾರ್ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಕೋಟ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಕುಮಾರ್ ಹಾಗೂ ಸಿಬ್ಬಂದಿಯೊಂದಿಗೆ ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದ ಮಹಾಲಕ್ಷ್ಮೀ ಹೋಟೆಲ್ ಎದುರು ಕಾರ್ಯಾಚರಣೆ ನಡೆಸಲಾಯಿತು.

ಈ ವೇಳೆ KA-47-5533 ಸಂಖ್ಯೆಯ ಅಶೋಕ್ ಲೇಲ್ಯಾಂಡ್ ಲಾರಿಯಲ್ಲಿ ಸರ್ಕಾರದ ಅನ್ನಭಾಗ್ಯ ಯೋಜನೆಯ 160 ಕ್ವಿಂಟಾಲ್ ಉಚಿತ ಪಡಿತರ ಅಕ್ಕಿಯನ್ನು ಯಾವುದೇ ಪರವಾನಿಗೆ ಇಲ್ಲದೆ ಕೇರಳದ ಕಾಸರಗೋಡಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಯಿತು.

ಲಾರಿಯಿಂದ 320 ಚೀಲಗಳಲ್ಲಿ ತುಂಬಿದ್ದ ಅಕ್ಕಿ, ಅಂದಾಜು ₹3.84 ಲಕ್ಷ ಮೌಲ್ಯದ ಅಕ್ಕಿ ಹಾಗೂ ₹3.50 ಲಕ್ಷ ಮೌಲ್ಯದ ಲಾರಿಯನ್ನು ಸೇರಿ ಒಟ್ಟು ₹7.34 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.