ಮುಲ್ಕಿ : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಠಾಣೆಗಳಲ್ಲಿ ದಾಖಲಾದ ಎನ್ ಡಿ ಪಿ ಎಸ್ ಕಾಯ್ದೆ ಹಾಗೂ ಮಾದಕ ವಸ್ತುಗಳ ಕೆಲವು ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿಯಂತೆ ಕೋಲ್ನಾಡಿನ ಕೈಗಾರಿಕಾ ಪ್ರದೇಶದ ಸಸ್ಟೈನೇ ಬಿಲಿಟಿ ಹೆಲ್ತ್ ಕೇರ್ ಸೊಲ್ಯೂಷನ್ ಕಂಪನಿಯಲ್ಲಿ ನಾಶಪಡಿಸಲಾಯಿತು.
ಈ ಸಂದರ್ಭ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ, ಸಾಗಾಟ ಹಾಗೂ ಸೇವನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿರಂತರವಾಗಿ ವಿಶೇಷ ಕಾರ್ಯಾಚರಣೆ ನಡೆಸಿ ಅಪರಾಧ ಪತ್ತೆ ಹಚ್ಚಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು 2026ನೇ ಸಾಲಿನಲ್ಲಿಒಟ್ಟು 87ಪ್ರಕರಣಗಳನ್ನು ದಾಖಲಿಸಿ 157 ಪೆಡ್ಲರ್ಸ್ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.




