Home Latest ಉಡುಪಿ: ಶಾಸಕ ಯಶಪಾಲ್ ಸುವರ್ಣ ಕಚೇರಿಗೆ ಮುತ್ತಿಗೆ ಯತ್ನ – ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌...

ಉಡುಪಿ: ಶಾಸಕ ಯಶಪಾಲ್ ಸುವರ್ಣ ಕಚೇರಿಗೆ ಮುತ್ತಿಗೆ ಯತ್ನ – ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸ್ ವಶಕ್ಕೆ…!!

ಉಡುಪಿ: ಉಡುಪಿಯಲ್ಲಿ ನಡೆದಿದ್ದ ಬಿಜೆಪಿ ಪ್ರತಿಭಟನೆಯ ವೇಳೆ ರಾಹುಲ್ ಗಾಂಧಿ ಅವರ ವಿರುದ್ಧ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಬಳಸಿದ ಕೀಳುಮಟ್ಟದ ಹಾಗೂ ಅವಹೇಳನಕಾರಿ ಭಾಷೆಯನ್ನು ಖಂಡಿಸಿ ಉಡುಪಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಯುವ ಕಾಂಗ್ರೆಸ್ ಕಾರ್ಯಕರ್ತರು
ಕೆಲಹೊತ್ತು ಜೋಡುಕಟ್ಟೆಯಲ್ಲಿ ಪ್ರತಿಭಟನೆ ನಡೆಸಿ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿದರು.ಪಕ್ಕದಲ್ಲೇ ಇರುವ ಶಾಸಕರ ಕಚೇರಿಗೆ ಮುತ್ತಿಗೆ ಹಾಕುವ ಯೋಜನೆ ಇದ್ದರೂ ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ.ಪ್ರತಿಭಟನೆಯಲ್ಲಿ ಕೆಲವೇ ಕೆಲವು ಮಂದಿ ಇದ್ದರೂ ಎಲ್ಲೆಡೆ ಖಾಕಿ ಸರ್ಪಗಾವಲು ಹಾಕಲಾಗಿತ್ತು. ಕಾರ್ಯಕರ್ತರು ಘೋಷಣೆ ಕೂಗುತ್ತಾ ಶಾಸಕರ ಕಚೇರಿಯತ್ತ ತೆರಳಲು ಅಣಿಯಾದಾಗ ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದರು.

ದ್ವೇಷ ಭಾಷಣ ಮತ್ತು ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಶಾಸಕರು ನೀಡಿದ ಕೀಳುಮಟ್ಟದ ಮತ್ತು ಅವಹೇಳನಕಾರಿ ಹೇಳಿಕೆ ವಿರುದ್ಧ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಬಿಜೆಪಿ ಪ್ರತಿಭಟನೆ ನಡೆಸಿದ್ದ ಜಟ್ಕಾ ಸ್ಟ್ಯಾಂಡ್ ಮುಂಭಾಗದಲ್ಲೇ ನಾಳೆಯ ಪ್ರತಿಭಟನೆ ನಡೆಯಲಿದ್ದು ಜಿಲ್ಲಾ ಕಾಂಗ್ರೆಸ್‌ ನ ಎಲ್ಲಾ ಘಟಕಗಳು ಇದರಲ್ಲಿ ಭಾಗಿಯಾಗಲಿವೆ.