Home Crime ಉಪ್ಪಿನಂಗಡಿ: ಬಸ್ಸಿಗೆ ಲಾರಿ ಢಿಕ್ಕಿ : ಮೂವರಿಗೆ‌ ಗಾಯ..!!

ಉಪ್ಪಿನಂಗಡಿ: ಬಸ್ಸಿಗೆ ಲಾರಿ ಢಿಕ್ಕಿ : ಮೂವರಿಗೆ‌ ಗಾಯ..!!

ಉಪ್ಪಿನಂಗಡಿ: ಉಪ್ಪಿನಂಗಡಿಯ ಬಳಿಯ ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ಸೊಂದಕ್ಕೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿಯಾಗಿ ಮೂವರು ಬಸ್ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.

ಗಾಯಗೊಂಡವರು ಜಲಜ, ಮಮತಾ, ತಾರನಾಥ ಎಂದು ತಿಳಿದು ಬಂದಿದೆ.

ಪುತ್ತೂರಿನಿಂದ ಉಪ್ಪಿನಂಗಡಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

ಈ ಸಂದರ್ಭ ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.

ಈ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.