Home Crime ಹೋಟೆಲ್ ಕಾರ್ಮಿಕ ಆತ್ಮಹತ್ಯೆ…!!

ಹೋಟೆಲ್ ಕಾರ್ಮಿಕ ಆತ್ಮಹತ್ಯೆ…!!

ಕುಂದಾಪುರ: ಬೈಂದೂರು ತಾಲೂಕಿನ ಖಂಬದಕೋಣೆ ನಿವಾಸಿ, ಹೋಟೆಲ್ ಕಾರ್ಮಿಕ ನಾರಾಯಣ ಪೂಜಾರಿ (43) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಕೆಲವು ಸಮಯ ಹೋಟೆಲ್‌ನಲ್ಲಿ ಕೆಲಸ ಮಾಡಿ ಇತ್ತೀಚೆಗೆ ಊರಿನ ಅಂಬಾಗಿಲು ಶಕ್ತಿ ಬೇಕರಿಯಲ್ಲಿ ಕೆಲಸ ಮಾಡಿ ಕೊಂಡಿದ್ದರು. ಒಂದುವರೆ ವರ್ಷದಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. 3 ದಿನಗಳ ಹಿಂದೆ ಹುಬ್ಬಳ್ಳಿಗೆ ಹೋಗಿದ್ದು, ಜು.30ರಂದು ಊರಿಗೆ ಮರಳಿದ್ದರು.

ಕೆರ್ಗಾಲ್‌ನಲ್ಲಿರುವ ಪತ್ನಿಯ ಮನೆಗೆ ಹೋಗಿ ನಂತರ ತಾಯಿ ಮನೆಯಾದ ಹೇರಂಜಾಲಿಗೆ ಹೋಗಿ ಪತ್ನಿಯ ಸಹೋದರ ಸಂತೋಷ್‌ ಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಅದೇ ದಿನ ಮಧ್ಯಾಹ್ನ 3 ಗಂಟೆಗೆ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಸಹೋದರ ಗೋಪಾಲಕೃಷ್ಣ ಪೂಜಾರಿ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.