Home Crime ಉಡುಪಿ: ರಸ್ತೆ ದಾಟುವಾಗ ಬಸ್ಸಿನಡಿಗೆ ಬಿದ್ದು ಮಾಜಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸ್ಥಳದಲ್ಲೇ ಮೃತ್ಯು…!

ಉಡುಪಿ: ರಸ್ತೆ ದಾಟುವಾಗ ಬಸ್ಸಿನಡಿಗೆ ಬಿದ್ದು ಮಾಜಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸ್ಥಳದಲ್ಲೇ ಮೃತ್ಯು…!

ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್‌ನಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿಯಲ್ಲಿ ಸಂಭವಿಸಿದೆ.

ಮೃತಪಟ್ಟ ಮಹಿಳೆ ಮಾಜಿ ನಗರ ಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಎಂದು ತಿಳಿಯಲಾಗಿದೆ.

ರಸ್ತೆ ದಾಟಲು ಯತ್ನಿಸುತ್ತಿದ್ದ ಮಹಿಳೆಯ ಮೇಲೆ ವೇಗವಾಗಿ ಬಂದ ಸತ್ಯನಾಥ್ ಖಾಸಗಿ ಬಸ್ ಹರಿದಿದೆ. ಬಸ್‌ನ ಚಕ್ರ ಮಹಿಳೆಯ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ರಸ್ತೆಯಲ್ಲಿ ವೇಗವಾಗಿ ಬರುವ ವಾಹನಗಳಿಂದ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ಮತ್ತು ಜೀಬ್ರಾ ಕ್ರಾಸ್ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.