Home Karnataka News ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ರಾಜಿನಾಮೆ…!!

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ರಾಜಿನಾಮೆ…!!

ಹುಬ್ಬಳ್ಳಿ: ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೇವಲ ಎರಡು ದಿನಗಳ ಹಿಂದಷ್ಟೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಹರಿದಾಡುತ್ತಿದ್ದ ಸುದ್ದಿಗಳನ್ನು ಅವರು ತಳ್ಳಿಹಾಕಿ, ತಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಹೊರಟ್ಟಿ ‘ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ. ಇದು ಗಾಳಿ ಸುದ್ದಿ’ ಎಂದು ಹೇಳಿದ್ದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಗ್ಯ ವಿಚಾರಿಸಿದ್ದರೂ, ರಾಜೀನಾಮೆ ಕುರಿತು ಯಾವುದೇ ಪ್ರಸ್ತಾಪ ಮಾಡಿರಲಿಲ್ಲ ಎಂದಿದ್ದರು. ಅಲ್ಲದೆ, ಕಾಂಗ್ರೆಸ್‌ನ ಇಬ್ಬರು ಸದಸ್ಯರು ಸಭಾಪತಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಅವರೇ ಇಂತಹ ಗಾಳಿ ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದರು.ಇದೀಗ ವಿಧಾನಪರಿಷತ್ ನಲ್ಲಿ ಸಂಖ್ಯಾಬಲ ಹೆಚ್ಚಿದ್ದರಿಂದ ಕಾಂಗ್ರೆಸ್ ನಿಂದ ಸಭಾಪತಿ ಆಯ್ಕೆ ನಡೆಯಲಿದೆ.