ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದಿದೆ.
ಘಟನೆಯ ವೇಳೆ ಕಾರಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರೂ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದ ನಿಖರ ಕಾರಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಪರಿಸ್ಥಿತಿಯನ್ನು ನಿಭಾಯಿಸಿದರು.




