Home Crime ಎರಡು ಟ್ರಕ್ ಗಳ ನಡುವೆ ಅಪಘಾತ : 13 ಮಂದಿ ಮೃತ್ಯು…!!

ಎರಡು ಟ್ರಕ್ ಗಳ ನಡುವೆ ಅಪಘಾತ : 13 ಮಂದಿ ಮೃತ್ಯು…!!

ಛತ್ತೀಸ್ಗಢ: ಎರಡು ಟ್ರಕ್ ಗಳ ಮದ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್ ಘಡ ರಾಜ್ಯದ ರಾಯಪುರ -ಬಲೋಡಾಬಜಾ‌ರ್ ರಸ್ತೆಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ನಡೆದಿದೆ.

ಈ ಘಟನೆಯಲ್ಲಿ 11 ಮಂದಿ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೌತಿಯಾ ಚಟ್ಟಿ ಕಾರ್ಯಕ್ರಮ ಮುಗಿಸಿ ವಾಪಸ್ ಬರುವ ವೇಳೆ ಅವಘಡ ಸಂಭವಿಸಿದೆ ಎಂದು ಮಾಹಿತಿ ತಿಳಿಯಲಾಗಿದೆ.

ಅತಿಯಾದ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓವರ್ ಲೋಡಿಂಗ್ ನಿಂದ ಅಪಘಾತ ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.