ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ರಾಯಿ ಹತ್ತಿರದ ಪಾಂಚಕೋಡಿ ಎಂಬಲ್ಲಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಸೋಮವಾರ ಮುಂಜಾನೆ ಪತ್ತೆಯಾಗಿದೆ.
ಮೃತ ವ್ಯಕ್ತಿ ಜೀವನ್ ಪಿಂಟೋ(48) ಎಂದು ತಿಳಿದು ಬಂದಿದೆ.
ನಿನ್ನೆಯಿಂದ ಇವರಿಗಾಗಿ ಎನ್ಡಿಆರ್ಎಫ್ ತಂಡದಿಂದ ಶೋಧ ನಡೆಸಲಾಗುತ್ತಿತ್ತು. ಬಂಟ್ವಾಳ ಠಾಣಾ ವ್ಯಾಪ್ತಿಯ ಸಂಗಬೆಟ್ಟುವಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ




