ಮಂಗಳೂರು : 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ 13ಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಆ.2ರಂದು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ತಾಲೂಕು ಮಾರ್ಗತಲೆಯ ಪ್ರಸ್ತುತ ಕಾಸರಗೋಡು, ಪಾವೂರು ಪೋಸ್ಟ್ ವ್ಯಾಪ್ತಿಯ ಮಂಜೇಶ್ವರದ ಕುಂಡಪ್ಪು, ಗೇರುಕಟ್ಟೆ ನಿವಾಸಿ ಉಮ್ಮರ್ ನವಾಫ್(33) ಬಂಧಿತ ಆರೋಪಿ.
ಆರೋಪಿಯ ವಿರುದ್ಧ ಸುಮಾರು 13ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತನು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷದಿಂದ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಈತನ ಮೇಲೆ 30ಕ್ಕಿಂತ ಹೆಚ್ಚು ವಾರಂಟ್ ಗಳನ್ನು ಹೊರಡಿಸಲಾಗಿರುತ್ತದೆ.
ಆರೋಪಿ ಮೇಲಿನ ಪ್ರಕರಣಗಳಲ್ಲಿ ಉಳ್ಳಾಲ ಪೊಲೀಸ್ ಠಾಣಾ ಮೊ.ನಂ 206/2012, U/s 143, 14, 148, 323, 427, 504, 506, 149 ಐಪಿಸಿ, ಉಳ್ಳಾಲ ಪೊಲೀಸ್ ಠಾಣಾ ಮೊ.ನಂ 27/2017, U/s 387 ಐಪಿಸಿ, ಉಳ್ಳಾಲ ಪೊಲೀಸ್ ಠಾಣಾ ಮೊ.ನಂ 183/17 U/s 143, 147, 148, 448, 504, 324, 323, 506, 427R/w 149 ಐಪಿಸಿ ಪ್ರಕರಣಗಳಲ್ಲಿ ಘನ ನ್ಯಾಯಾಲಯದ ಆದೇಶದಂತೆ ಪ್ರೋಕ್ಲಮೇಶನ್ ಜಾರಿ ಮಾಡಲಾಗಿರುತ್ತದೆ. ಉಳ್ಳಾಲ ಪೊಲೀಸ್ ಠಾಣಾ ಮೊ.ನಂ 276/15 U/s-143, 144, 148, 448, 451, 452, 326, 307, 397, 506, 149 ಐಪಿಸಿ ಪ್ರಕರಣದಲ್ಲಿ ನ್ಯಾಯಾಲಯವು ಎಲ್.ಪಿ.ಸಿ ಮಾಡಿರುತ್ತದೆ.
ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರವರ ಮಾರ್ಗದರ್ಶನದಂತೆ ಮಂಗಳೂರು ದಕ್ಷಿಣ ಉಪವಿಭಾಗ ಕಛೇರಿಯ ವಿಶೇಷ ಕರ್ತವ್ಯ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.




