Home Latest ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಅವಮಾನ – ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಬಿಜೆಪಿ...

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಅವಮಾನ – ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಬಿಜೆಪಿ ದೂರು…!!

ಉಡುಪಿ: ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಅವಮಾನವಾಗುವ ರೀತಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಮನೆ ಮನೆಗೆ ತೆರಳಿ ಸಮರ್ಪಣಾ ನಿಧಿ ಸಂಗ್ರಹಿಸಿದವರನ್ನು “ಚಪ್ಪಲಿಯಿಂದ ಹೊಡೆಯಬೇಕು” ಎಂಬ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಇಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಈ ದೂರಿನ ಮೂಲಕ, ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಹ ಹೇಳಿಕೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಉಡುಪಿ ನಗರ ಮಂಡಲ ಅಧ್ಯಕ್ಷ ದಿನೇಶ್ ಅಮೀನ್, ಸುದೀಪ್ ಶೆಟ್ಟಿ ನಿಟ್ಟೆ, ಶ್ರೀನಿಧಿ ಹೆಗ್ಡೆ, ಅಜಿತ್ ಜೋಗಿ, ಸತ್ಯಾನಂದ ನಾಯಕ್, ಬಿಲ್ಲಾಡಿ ಪೃಥ್ವಿರಾಜ್ ಶೆಟ್ಟಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು