ಉಡುಪಿ: ನಗರ ಸಭೆಯ ಪೌರಾಯುಕ್ತ ಮಹಾಂತೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಪೌರಾಯುಕ್ತರಾಗಿ ಸಂತೋಷ್ ಡಿಎಸ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಸಂತೋಷ್ ಡಿಎಸ್ ಅವರು ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ಪುರಸಭೆಯ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಉಡುಪಿ ನಗರಸಭೆಗೆ ಸಂತೋಷ್ ಡಿಎಸ್ ಅವರನ್ನು ಪೌರಾಯುಕ್ತರಾಗಿ ನಿಯುಕ್ತಿಗೊಳಿಸಲಾಗಿದೆ ಎಂದು ಸರ್ಕಾರ ಅಧಿಕೃತವಾಗಿ ತಿಳಿಸಿದೆ.
ಮಹಾಂತೇಶ್ ಅವರಿಗೆ ಇನ್ನಷ್ಟೇ ಕರ್ತವ್ಯದ ಸ್ಥಳ ನಿಯುಕ್ತಿಗೊಳಿಸಬೇಕಿದೆ.




