Home Latest ಮಲ್ಪೆ ಕಲ್ಮಾಡಿ ಪರಿಸರದಲ್ಲಿ ನೀರಿಗಾಗಿ ಗ್ರಾಮಸ್ಥರ ಪರದಾಟ…!!

ಮಲ್ಪೆ ಕಲ್ಮಾಡಿ ಪರಿಸರದಲ್ಲಿ ನೀರಿಗಾಗಿ ಗ್ರಾಮಸ್ಥರ ಪರದಾಟ…!!

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಸಮರ್ಪಕ ನಳ್ಳಿ ನೀರು ಪೂರೈಕೆಯಾಗದ ಕಾರಣ ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಉಡುಪಿ ನಗರಸಭೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಲ್ಪೆ ಕಲ್ಮಾಡಿ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಸರಬರಾಜು ಅಸ್ತವ್ಯಸ್ತಗೊಂಡಿದೆ. ಪರಿಣಾಮವಾಗಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.
ಮಹಿಳೆಯರು ಹಾಗೂ ಹಿರಿಯ ನಾಗರಿಕರು ನೀರಿನ ಬಿಂದಿಗೆಗಳೊಂದಿಗೆ ದೂರದ ಪ್ರದೇಶಗಳಿಗೆ ತೆರಳಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕವಾಗಿ ಟ್ಯಾಂಕರ್ ಮೂಲಕವೂ ನೀರು ಪೂರೈಕೆಯಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಶೀಘ್ರವೇ ಸಮಸ್ಯೆ ಪರಿಹರಿಸಿ, ನಿರಂತರ ಕುಡಿಯುವ ನೀರಿನ ಪೂರೈಕೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸಮಸ್ಯೆ ಬಗೆಹರಿಯದಿದ್ದರೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.