ಚಿತ್ರದುರ್ಗ: ಕಾರು ಹಾಗೂ ಲಾರಿ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ.
ಮೃತರು ಆಂಧ್ರಪ್ರದೇಶದ ಗುಂಟೂರಿನ ವೆಂಕಟಪುರಂ ಮೂಲದವರಾದ ಸುನೀತಾ(34), ಶ್ಯಾಂ ಬಾಬು(17), ಶಿವನಾಗಲಿ(55) ಎಂದು ಗುರುತಿಸಲಾಗಿದೆ.
ಇವರು ಆಂಧ್ರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ವೇಳೆ ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿದ್ದ ಕಾರಿಗೆ, ಹೊಳಲ್ಕೆರೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.