Home Crime ಉದ್ಯಾವರ: ಪಾಪನಾಸಿನಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ…!!

ಉದ್ಯಾವರ: ಪಾಪನಾಸಿನಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ…!!

ಉಡುಪಿ : ಉದ್ಯಾವರ ಸಮೀಪದ ಪಿತ್ರೋಡಿ, ಕಾಪು ಪೊಲೀಸ್ ಠಾಣೆ ವ್ಯಾಪ್ತಿಯ ತಾಂಡೆಲ್ ಗೆಸ್ಟ್ ಹೌಸ್ ಬಳಿ ಇರುವ ಪಾಪನಾಸಿನಿ ಹೊಳೆಯಲ್ಲಿ ಸುಮಾರು 30–35 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು.

ಮೃತದೇಹವನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯದಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು.ಮೃತ ವ್ಯಕ್ತಿಯ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಈ ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ಅಥವಾ ಸಂಬಂಧಿಕರು ಇದ್ದಲ್ಲಿ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.