Home Crime ಮಂಗಳೂರು : ಖಾಸಗಿ ಕಾಲೇಜು ವಿದ್ಯಾರ್ಥಿಗಳ ಮೇಲೆ ರಾಗಿಂಗ್ : ಪ್ರಕರಣ ದಾಖಲು…!!

ಮಂಗಳೂರು : ಖಾಸಗಿ ಕಾಲೇಜು ವಿದ್ಯಾರ್ಥಿಗಳ ಮೇಲೆ ರಾಗಿಂಗ್ : ಪ್ರಕರಣ ದಾಖಲು…!!

ಮಂಗಳೂರು : ನಗರದ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಮೇಲೆ ಐದಾರು ಮಂದಿ ರ‍್ಯಾಗಿಂಗ್ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

ಪಾಂಡೇಶ್ವರ ಸಮೀಪದ ಗುಜ್ಜರಕೆರೆಯ ಚಹಾ ಅಂಗಡಿಯ ಬಳಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ನಡೆಸಿದ್ದಾರೆ ಎನ್ನಲಾಗಿದೆ.

ರ‍್ಯಾಗಿಂಗ್ ಗೆ ಒಳಗಾದ ಇಬ್ಬರು ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.