Home Latest ಪೊಲೀಸ್ ಪೇದೆಯ ಕುಟುಂಬಕ್ಕೆ 1.45 ಕೋಟಿ ವಿಮಾ ಚೆಕ್ ಹಸ್ತಾಂತರ…!!

ಪೊಲೀಸ್ ಪೇದೆಯ ಕುಟುಂಬಕ್ಕೆ 1.45 ಕೋಟಿ ವಿಮಾ ಚೆಕ್ ಹಸ್ತಾಂತರ…!!

ಉಡುಪಿ: ಕರ್ತವ್ಯದಲ್ಲಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಅರ್ಜುನ ಶಂಕರ ನೆಲ್ಲೂರ ಅವರ ಅವಲಂಬಿತರಿಗೆ ಎಸ್.ಬಿ.ಐ. ಪೊಲೀಸ್ ಸ್ಯಾಲರಿ ಪ್ಯಾಕೇಜ್ ಯೋಜನೆಯಡಿ 1.45 ಕೋಟಿ ರೂ. ಮೊತ್ತದ ವಿಮಾ ಚೆಕ್ ಹಸ್ತಾಂತರ ಕಾಯಕ್ರಮ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆಯಿತು.

ಎಸ್.ಬಿ.ಐ. ಮುಖ್ಯ ವ್ಯವಸ್ಥಾಪಕ ಕೀಳಂಜೆ ಕೃಷ್ಣರಾಜ ಭಟ್, ಮಲ್ಪೆ ಶಾಖೆಯ ಮೆನೇಜರ್ ರಾಜೇಶ್ ಗಂಗೊಳ್ಳಿ, ಅಧಿಕಾರಿಗಳಾದ ಶ್ರೀನಿವಾಸ್, ಪ್ರಣವ್ ಪೈ , ತನ್ಮಯ್ ಉಪಸ್ಥಿತರಿದ್ದರು.

2023-24ನೇ ಸಾಲಿನಲ್ಲಿ ಸಿ.ಎಸ್.ಪಿ. ಜಿಲ್ಲಾ ನಿಯಂತ್ರಣ ಕೊಠಡಿ, ಉಡುಪಿ ಘಟಕದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅರ್ಜುನ ನೆಲ್ಲೂರ ಹಾವೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು.