Home Latest ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಮೃತ್ಯು…!!

ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಮೃತ್ಯು…!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ.

ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ಅಮೀನ್ (15) ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ದುರ್ಘಟನೆಯಿಂದ ಶಾಲೆ ಹಾಗೂ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಮೃತ ಲಿಖಿತ್ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.