ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತರನ್ನು ಮೋಹನ್ ರಾಜ್ ಎಸ್ (36) ಎಂದು ಗುರುತಿಸಲಾಗಿದೆ. ಅವರು ಯಾವುದೇ ಉದ್ಯೋಗ ಮಾಡುತ್ತಿರಲಿಲ್ಲ ಹಾಗೂ ಮದುವೆಯಾಗಿರಲಿಲ್ಲ. ಇದೇ ಕಾರಣದಿಂದ ಅಥವಾ ಇತರ ವೈಯಕ್ತಿಕ ಕಾರಣಗಳಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆಗಸ್ಟ್ 6ರಂದು ಬೆಳಿಗ್ಗೆ 7:30ರಿಂದ 8:00 ಗಂಟೆಯ ನಡುವಿನ ಅವಧಿಯಲ್ಲಿ ತಮ್ಮ ಮನೆಯ ಹಿಂಭಾಗದ ತೋಟದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಮೃತರ ತಂದೆ ಸಂಜೀವಿ (67) ಅವರು ನೀಡಿದ ಮಾಹಿತಿಯ ಆಧಾರದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.




