Home Latest ಗಾಯಾಳು ಪಿಎಸ್ಐ ಆರೋಗ್ಯ ವಿಚಾರಿಸಿದ ಎಸ್.ಪಿ. ಹರಿರಾo ಶಂಕರ್..!!

ಗಾಯಾಳು ಪಿಎಸ್ಐ ಆರೋಗ್ಯ ವಿಚಾರಿಸಿದ ಎಸ್.ಪಿ. ಹರಿರಾo ಶಂಕರ್..!!

ಉಡುಪಿ : ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್‌ ಡಿ’ಸೋಜಾನನ್ನು ಕೊಲೆಗೈದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಕಾಪು ಪಿಎಸ್ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ತಂಡ ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪದ ಒತ್ತಿನೆಣೆ ಪೋಲಿಸರಿಗೆ ಹಲ್ಲೆ ನಡೆಸಿ ಆರೋಪಿ ರಾಜು ಪರಾರಿಯಾಗಲು ಯತ್ನಿಸಿದ್ದು, ಆ ವೇಳೆ ಕಾಪು ಪಿಎಸ್ಐ ತೇಜಸ್ವಿ ಅವರು ತಮ್ಮ ಸರ್ವಿಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಆ ವೇಳೆ ಎಸ್ಐ ತೇಜಸ್ವಿ ಅವರಿಗೆ ಗಾಯವಾಗಿದ್ದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಕಿ ಚಿಕಿತ್ಸೆ ಪಡೆಯುತ್ತಿದ್ದು, ಎಸ್.ಪಿ. ಹರಿರಾಮ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ತೇಜಸ್ವಿ ಅವರ ಆರೋಗ್ಯ ವಿಚಾರಿಸಿದರು.