Home Crime ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಅರೆಸ್ಟ್…!!

ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಅರೆಸ್ಟ್…!!

ಬೆಳ್ತಂಗಡಿ: ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ವೇಣೂರು ಪೊಲೀಸ್ ಠಾಣೆಯ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಸದಾನಂದ, ತಂದೆ ಶೀನಪ್ಪ ಎಂಬಾತನನ್ನು ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಮೊಗ್ರು ಗ್ರಾಮದ ವ್ಯಾಪ್ತಿಯಲ್ಲಿ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ವೇಣೂರು ಪೊಲೀಸ್ ಠಾಣೆಯ ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.