Home Crime 27 ಗ್ರಾಂ ಗಾಂಜಾ ಪತ್ತೆ : ಯುವಕನಿಗೆ ನ್ಯಾಯಾಂಗ ಬಂಧನ…!!

27 ಗ್ರಾಂ ಗಾಂಜಾ ಪತ್ತೆ : ಯುವಕನಿಗೆ ನ್ಯಾಯಾಂಗ ಬಂಧನ…!!

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೋಲೀಸರು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಆತ ಕುವೆಟ್ಟು ನಿವಾಸಿ ತ್ವಲಹ್ ಯಾನೆ ಅನ್ವರ್ ಯಾನೆ ಅನ್ಸರ್, 21 ವರ್ಷ ಎಂದು ತಿಳಿಸಿದ್ದಾನೆ.

ಬಳಿಕ ಪೊಲೀಸರು ಆತನನ್ನು ತಪಾಸಣೆ ನಡೆಸಿದಾಗ, ಆತನ ಬಳಿ ಸುಮಾರು 27 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ಫೋನ್ ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 82/2026ರಂತೆ, NDPS ಕಾಯ್ದೆಯ ಸಂಬಂಧಿತ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.